ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗಬಾರದೆಂದು ಸೂಚನೆ ನೀಡಿದ್ದಾರೆ.
ಇನ್ನು ಆನ್ ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ, ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿ.ಯು ಮಟ್ಟದಿಂದಲೇ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶೈಕ್ಷಣಿಕ ವರ್ಷ ಆರಂಭವಾಗಬೇಕಿದ್ದ ಸಮಯ ಬಂದರೂ ನಡೆಯಬೇಕಾದ ಪರೀಕ್ಷೆಗಳೇ ಇನ್ನು ಆರಂಭವಾಗಿಲ್ಲ. ಹೀಗಿರುವಾಗ ಮಕ್ಕಳ ವಿದ್ಯಾಭ್ಯಾಸದ ಸ್ಥಿತಿಯೇನು ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ. ಹೀಗಾಗಿ ಸಿಎಂ ಆನ್ ಲೈನ್ ತರಗತಿಗಳಿಗೆ ಒತ್ತು ನೀಡುವಂತೆ ಸೂಚನೆ ನೀಡಿದ್ದಾರೆ.

Exit mobile version