ಬೆಂಗಳೂರು: ನಗರದಲ್ಲಿ ಉತ್ತಮ ಮಳೆ ಸುರಿದಿದ್ದು, ಇಂದು ಸುರಿದ ಮಳೆಗೆ ಉದ್ಯಾನ ನಗರಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ.

22 ವರ್ಷದ ಶಿಲ್ಪಾ ಸಾವನ್ನಪ್ಪಿದ ಮಹಿಳೆ. ಮಳೆಯ ಅಬ್ಬರಕ್ಕೆ ನಿರ್ಮಾಣ ಹಂತದ ಕಟ್ಟಡದ ಇಟ್ಟಿಗೆ, ಕಲ್ಲುಗಳು ಪಕ್ಕದ ಮನೆಯ ಮೇಲೆ ಬಿದ್ದಿವೆ. ಪರಿಣಾಮ ಮನೆಯಲ್ಲಿದ್ದ ಶಿಲ್ಪಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಧನುಷ್ ಎಂಬ ಬಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ನಾಗರಭಾವಿ, ಪೀಣ್ಯ, ಯಲಹಂಕ, ಹೆಬ್ಬಾಳ, ನಾಗವಾರ, ಕೆ.ಆರ್.ಪುರಂ, ಜಯನಗರ, ಜೆಪಿನಗರ, ಬಿಟಿಎಂ ಲೇಔಟ್ ಸೇರಿದಂತೆ ಬಹುತೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಯಶವಂತಪುರದಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮೇಲೆ ಮರ ಬಿದ್ದಿದೆ. ಜೊತೆಗೆ ಮರದ ಕೊಂಬೆಗಳು ಬಿದ್ದು ಎರಡು ಕಾರ್ ಗಳು ಜಖಂ ಆಗಿವೆ. ಯಲಹಂಕದಲ್ಲಿ ಎರಡು ಹಾಗೂ ಆಡುಗೋಡಿ ಹಾಗೂ ಗೊರಗೊಂಟೆಪಾಳ್ಯದಲ್ಲಿ ಒಂದು ಮರ ಬಿದ್ದಿದೆ. ಬಿಟಿಎಂ ಲೇಔಟ್ ನಲ್ಲಿ ಟ್ರಾನ್ಸಫಾರಂ ಮೇಲೆ ಮರ ಬಿದ್ದು ಇಡೀ ಬಿಟಿಎಂ ಲೇಔಟ್ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.

ಪ್ಲಾಸ್ಮಾ ಚಿಕಿತ್ಸೆಯಿಂದ ಗಂಭೀರ ಪರಿಸ್ಥಿತಿಯ ಸೋಂಕಿತರ ರಕ್ಷಣೆ ಕಷ್ಟ: ಕೇಜ್ರಿವಾಲ್

ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು…

I can't breathe: ಜಗತ್ತಿನಾದ್ಯಂತ ಕಪ್ಪುಜನರಿಗೆ ಮಿಡಿತ

ಫ್ಲಾಯ್ಡ್ ಅವರ ಕುತ್ತಿಗೆಯ ಮೇಲೆ ಮೊಣಕಾಲನ್ನು ಇಟ್ಟು, ನೆಲಕ್ಕೆ ಒತ್ತಿದ್ದರು. ಈ ವಿಡಿಯೋದಲ್ಲಿ ಫ್ಲಾಯ್ಡ್ “I can’t breathe” ಎಂದು ನಿರಂತರವಾಗಿ ಅವಲತ್ತುಕೊಂಡಿದ್ದರು. ಈ ವಿಡಿಯೋವನ್ನು ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳಲ್ಲಿ ಕೋಟ್ಯಂತರ ಜನ ನೋಡಿದ್ದಾರೆ.

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…