ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ.

ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ವಿಜಯಪುರದ ಜಿ. ಆಲಮೇಲ ಪಟ್ಟಣದಲ್ಲಿ ಇಂದು ಗರಿಷ್ಠ 45.3 ಡಿಗ್ರಿ ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ 45 ಡಿಗ್ರಿ ಆಸುಪಾಸಿನಲ್ಲಿಯೇ ಉಷ್ಣಾಂಶ ಇದೆ. ಬಿಸಿಲ ಝಳದಿಂದ ವಿಜಯಪುರದ ಮಂದಿ ತತ್ತರಿಸಿ ಹೋಗಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆ ಸುರಿದಿದೆ. ಗುಡುಗು ಮಿಂಚು ಸಮೇತ ಬೆಂಗಳೂರಿನ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಆಗಿದೆ. ಮಳೆ ನಿಂತ ಮೇಲೆ ರೋಡ್ ಗಳು ಕೆರೆಗಳಾಗಿವೆ. ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಜಾಲಹಳ್ಳಿ, ಮತ್ತಿಕೆರೆ ಸೇರಿದಂತೆ ಹಲವಡೆ ಬಿರುಸಿನ ಮಳೆಯಾಗಿದೆ. ಭಾನುವಾರ ಲಾಕ್ ಡೌನ್ ಆಗಿದ್ದರಿಂದ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇಂದು ಕೆಲಸ ಮುಗಿಸಿ ಮನೆಯತ್ತ ಹೊರಟ ಜನರು ಮಳೆಯಲ್ಲಿ ಸಿಲುಕಿದರು.

Leave a Reply

Your email address will not be published. Required fields are marked *

You May Also Like

ನೆಕೆಡ್ ಚಿತ್ರ 27ರಂದು ತೆರೆಗೆ ಬರಲಿದೆ: ಮಾದಕ ಫೋಟೋ ಹಂಚಿಕೊಂಡ RGV

ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್…

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…

ಮನೆಯಲ್ಲಿಯೇ ಕುಳಿತ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಬೊಜ್ಜು ಸಮಸ್ಯೆ!

ಲಾಕ್ ಡೌನ್ ನಿಂದಾಗಿ ಸದ್ಯ ಮಕ್ಕಳು ಮನೆಯಲ್ಲಿಯೇ ತಮ್ಮ ಬಾಲ್ಯ ಕಳೆಯುತ್ತಿದ್ದಾರೆ. ಇದರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.