ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ.

ವಿಜಯಪುರ ಜಿಲ್ಲೆಯ ಇತಿಹಾಸದಲ್ಲಿಯೇ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ವಿಜಯಪುರದ ಜಿ. ಆಲಮೇಲ ಪಟ್ಟಣದಲ್ಲಿ ಇಂದು ಗರಿಷ್ಠ 45.3 ಡಿಗ್ರಿ ತಾಪಮಾನ ದಾಖಲಾಗಿದೆ. ಕಳೆದ ಮೂರು ದಿನಗಳಿಂದ 45 ಡಿಗ್ರಿ ಆಸುಪಾಸಿನಲ್ಲಿಯೇ ಉಷ್ಣಾಂಶ ಇದೆ. ಬಿಸಿಲ ಝಳದಿಂದ ವಿಜಯಪುರದ ಮಂದಿ ತತ್ತರಿಸಿ ಹೋಗಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಈ ತಾಪಮಾನ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆ ಸುರಿದಿದೆ. ಗುಡುಗು ಮಿಂಚು ಸಮೇತ ಬೆಂಗಳೂರಿನ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಆಗಿದೆ. ಮಳೆ ನಿಂತ ಮೇಲೆ ರೋಡ್ ಗಳು ಕೆರೆಗಳಾಗಿವೆ. ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಜಾಲಹಳ್ಳಿ, ಮತ್ತಿಕೆರೆ ಸೇರಿದಂತೆ ಹಲವಡೆ ಬಿರುಸಿನ ಮಳೆಯಾಗಿದೆ. ಭಾನುವಾರ ಲಾಕ್ ಡೌನ್ ಆಗಿದ್ದರಿಂದ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇಂದು ಕೆಲಸ ಮುಗಿಸಿ ಮನೆಯತ್ತ ಹೊರಟ ಜನರು ಮಳೆಯಲ್ಲಿ ಸಿಲುಕಿದರು.

Exit mobile version