ಚೆನ್ನೈ: ತಮಿಳುನಾಡಿನಲ್ಲಿನ ನೋಕಿಯಾ ಫೋನ್ ತಯಾರಿಕಾ ಘಟಕದ 49 ಜನ ಸಿಬ್ಬಂದಿಗೆ ಕೊರೊನಾ ಅಂಟಿಕೊಂಡಿದೆ. ಹೀಗಾಗಿ ಇಡೀ ಘಟಕದ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಶ್ರೀಪೆರಂಬದೂರಿನಲ್ಲಿರುವ ತಯಾರಿಕಾ ಘಟಕದಲ್ಲಿನ 42 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಕೂಡ ಕನಿಷ್ಠ 9 ನೌಕರರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದರಿಂದ ಆ ಘಟಕ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

Leave a Reply

Your email address will not be published. Required fields are marked *

You May Also Like

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ಲಕ್ಕುಂಡಿ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿ ಯಾರು..?

ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು…

ದೇಶದಲ್ಲಿ 7.20 ಲಕ್ಷ ಪಾಸಿಟಿವ್! : 20 ಸಾವಿರ ದಾಟಿದ ಸಾವಿನ ಸಂಖ್ಯೆ

ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್…

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…