ಲಡಾಕ್ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ತಲುಪಿದ ಪರಿಸ್ಥಿತಿ!

ನವದೆಹಲಿ: ಲಡಾಕ್ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.
ಚೀನಾ ದೇಶದ ಸೇನೆಯೊಂದಿಗೆ ಗಡಿಯಲ್ಲಿ ಸೇನೆಯ ನಿಲುಗಡೆ ಮತ್ತು ಅಲ್ಲಿನ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಭಾರತೀಯ ಸೇನೆ ಮೂರು ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಮೋದಿಯವರು ವಿದೇಶಾಂಗ ಸಚಿವರ ಜೊತೆ ಮಾತುಕತೆ ನಡೆಸಿದ್ದರು. ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೂರೂ ಪಡೆಗಳ ಮುಖ್ಯಸ್ಥರು ಭೇಟಿ ಮಾಡಿ ಚರ್ಚೆ ನಡೆಸಿದ್ದರು ಎಂದು ತಿಳಿದುಬಂದಿದೆ.
ಸಿಕ್ಕಿಮ್ ಮತ್ತು ಲಡಾಕ್ ನಲ್ಲಿ ಸೇನೆಯ ನಿಯೋಜನೆ ಸಮಯದಲ್ಲಿ ಈ ಮಾತುಕತೆ ನಡೆದಿದ್ದು ಮಹತ್ವ ಪಡೆದಿದೆ. ಸ್ಯಾಟಲೈಟ್ ಚಿತ್ರದಲ್ಲಿ ಚೀನಾ ಲಡಾಕ್ ಬಳಿ ವಾಯುನೆಲೆ ವಿಸ್ತರಿಸುತ್ತಿರುವುದು ಕಂಡುಬಂದಿದೆ.

ಲಡಾಕ್ ನ ವಿವಾದಿತ ಪ್ರದೇಶದಲ್ಲಿ ಚೀನಾದ ಹೆಲಿಕಾಪ್ಟರ್ ಗಸ್ತು ತಿರುಗುತ್ತಿರುವುದು ಕಂಡುಬಂದಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಭದೌರಿಯಾ ಹೇಳುತ್ತಿದ್ದಾರೆ.

Exit mobile version