ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಪರ ಹೋರಾಟ ಮಾಡಿಕೊಂಡು ಬಂದವರು. ನೀತಿ ನಿಯಮಗಳಡಿಯಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರ ಒದಗಿಸಲಾಗುವುದು.ಇದರಲ್ಲಿ ಯಾವುದೇ ಸಂಶಯ ಬೇಡ. ವಿಪಕ್ಷಗಳ ಅನಗತ್ಯ ಟೀಕೆಗೆ ಗಮನ ಕೊಡುವ ಅವಶ್ಯಕತೆಯೂ ಇಲ್ಲ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಾರ ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆದಂತಹ ರೈತರಿಗೆ ಬೆಂಬಲ ಬೆಲೆ ನೀಡುವಂತಹ ಐತಿಹಾಸಿಕ ತೀರ್ಪನ್ನು ಮುಖ್ಯಮಂತ್ರಿಗಳು ಘೋಷಿಸಿದ್ದರು. 10 ಲಕ್ಷ ರೈತರಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 500 ಕೋಟಿ ರೂ.ಗಳ ಹಣ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸರ್ಕಾರದಿಂದ ಮಂಗಳವಾರ ಮಾರ್ಗಸೂಚಿ ಹೊರಡಿಸಲಾಗಿದೆ. ಮಾರ್ಗಸೂಚಿಗಳಂತೆ ಫಲಾನುಭವಿಗಳ ಆಯ್ಕೆ ಮಾಡಿ ಸೂಕ್ತ ಆರ್ಥಿಕ ನೆರವು ನೀಡಲಾಗುವುದು ಎಂದರು.
ಹೋಬಳಿ ಮಟ್ಟದಿಂದ ರಾಜ್ಯಮಟ್ಟದವರೆಗೆ ಸಮಿತಿ ರಚನೆ
ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರನ್ನೊಳಗೊಂಡ ಹೋಬಳಿ ಮಟ್ಟದ ಸಮಿತಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನೊಳಗೊಂಡ ತಾಲೂಕು ಸಮಿತಿ,
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಉಪ ಕೃಷಿ ನಿರ್ದೇಶಕರನ್ನೊಳಗೊಂಡ ಸಮಿತಿ ಹಾಗೂ ಕೃಷಿ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕೃಷಿ ನಿರ್ದೇಶಕರು, ಅಪರ ಕೃಷಿನಿರ್ದೇಶಕರು ಮತ್ತು ಜಂಟಿ ಕೃಷಿನಿರ್ದೇಶಕರನ್ನೊಳಗೊಂಡ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಸದ್ಯದಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರದ ಹಣ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಲಾಕ್ಡೌನ್ ಸಮಯದಲ್ಲಿ ಮೂವತ್ತು ಜಿಲ್ಲೆಗಳಿಗೆ ಮೂವತ್ತು ದಿನಗಳ ಕಾಲ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಅವಲೋಕಿಸಿ, ಕೈಗೊಂಡ ಕ್ರಮಗಳು ಸಲಹೆ ಸೂಚನೆಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ನೀಡಿದ ವರದಿಯಲ್ಲಿ ಬಹುತೇಕ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಬಿಜಾಪುರದಲ್ಲಿ ದ್ರಾಕ್ಷಿ ಆನ್ಲೈನ್ ಮಾರಾಟ, ಕೊಪ್ಪಳ ಅಕಾಲಿಕ ಮಳೆ ಬೆಳೆ ನಷ್ಟ ಪರಿಹಾರ , ತರಕಾರಿ, ಹೂವುಹಣ್ಣು ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಒದಗಿಸಿದೆ. ಮೆಕ್ಕೆಜೋಳ ಖರೀದಿಗೆ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. 1610 ಕೋಟಿ ರೂ.ಪ್ಯಾಕೇಜ್ ಘೋಷಿಸಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!!

ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.

ವರುಣನ ಆರ್ಭಟ – ಸಂತ್ರಸ್ಥರಿಗೆ ಪರಿಹಾರ ಘೋಷಿಸಿದ ಸರ್ಕಾರ!

ಪ್ರವಾಹ ಸಂತ್ರಸ್ಥರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗುತ್ತಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯನ ಅವಾಂತರ ಜೋರಾಗಿದೆ.

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸರ್ಕಾರದ ನಡೆಯಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯ -ಮೋಹನ ದೊಡಕುಂಡಿ

ಉತ್ತರಪ್ರಭ ಸುದ್ದಿಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ…