ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಬಲಿಯಾದವರ ಸಂಖ್ಯೆ 47ಕ್ಕೆ ಏರಿಕೆ ಕಂಡಿದೆ.

ಇಂದು ಸಂಜೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಕಲಬುಗಿಯಲ್ಲಿ 28, ಯಾದಗಿರಿಯಲ್ಲಿ 16, ಹಾಸನ 15, ದಕ್ಷಿಣ ಕನ್ನಡ 11, ಬೀದರ್ 13, ಉತ್ತರ ಕನ್ನಡ 6, ಉಡುಪಿ 9, ದಾವಣಗೆರೆ 6, ಚಿಕ್ಕಬಳ್ಳಾಪುರ 4, ರಾಯಚೂರು 5, ಬೆಳಗಾವಿ 4, ಬೆಂಗಳೂರು ನಗರ 6, ಚಿಕ್ಕಮಗಳೂರು 3, ವಿಜಯಪುರ 1, ಕೋಲಾರ 1 ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 2, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಯಾದಗಿರಿ ಜಿಲ್ಲೆಯ ನಿವಾಸಿ 69 ವರ್ಷದ ವೃದ್ಧೆ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾರೆ. ವೃದ್ಧೆಯು ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿದ್ದರು. ಬೀದರ್ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೊನಾ ಸೋಂಕು ಪತ್ತೆಯಾಗಿತ್ತು. 80 ವರ್ಷದ ವೃದ್ಧನಿಗೆ ಮೇ 22ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಮೇ 26ರ ರಾತ್ರಿ ಹೃದಯಾಘಾತದಿಂದ ವೃದ್ಧ ಸಾವನ್ನಪ್ಪಿದ್ದರು.

Leave a Reply

Your email address will not be published. Required fields are marked *

You May Also Like

ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಗುಡುಗಿದ ತೇಜಸ್ವಿ ಯಾದವ್!

ಪಾಟ್ನಾ : ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ವಿರುದ್ಧ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಪತ್ನಿ ಕೊಂದ ಸೈಕೋ ಪತಿ..!!

ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ…

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…