ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.
ದೇಶಾದ್ಯಂತದ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಯ ದುಬಾರಿ ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ, ಹಲವು ಖಾಸಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸರ್ಕಾರ ಭೂಮಿಯನ್ನು ಉಚಿತವಾಗಿ ಅಥವಾ ಅತ್ಯಂತ ಕಡಿಮೆ ದರದಲ್ಲಿ ನೀಡಲಾಗಿದೆ. ಈಗ ಅಂತಹ ರಸ್ ಸೋಂಕಿತ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದಿದೆ.
ಆಸ್ಪತ್ರೆಗಾಗಿ ಉಚಿತ ಅಥವಾ ಕಡಿಮೆ ದರಕ್ಕೆ ಭೂಮಿ ಪಡೆದ ಚಾರಿಟೇಬಲ್ ಆಸ್ಪತ್ರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಸುಪ್ರೀಂ ಕೋರ್ಟ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

Exit mobile version