ಭೋಪಾಲ್: ಮದುವೆ ಸಂಭ್ರಮದಲ್ಲಿ ಹಾಜರಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ನವ ದಂಪತಿ ಸೇರಿದಂತೆ 100 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವಧುವಿನ ಸಂಬಂಧಿಯೊಬ್ಬರಿಗೆ ಮಂಗಳವಾರ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ದಂಪತಿ ಹಾಗೂ ಇತರೆ 100 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಚಿಂದ್ವಾರ ನಗರ ಪಾಲಿಕೆ ಆಯುಕ್ತ ರಾಜೇಶ್ ಶಾಹಿ ಅವರು ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿರುವ ವಧುವಿನ ಸಂಬಂಧಿ ಸಿಐಎಸ್ಎಫ್ ಸಿಬ್ಬಂದಿಯಾಗಿದ್ದು, ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ. 26ರಂದು ಮದುವೆಯಲ್ಲಿ ಭಾಗವಹಿಸಿದ್ದರು.

ಅವರಿಗೆ ಮೂರ್ನಾಲ್ಕು ದಿನಗಳ ಹಿಂದೆಯೇ ಸೋಂಕಿನ ಲಕ್ಷಣಗಳು ಕಂಡು ಬಂದಿತ್ತು. ನಂತರ ಅವರ ಮಾದರಿಯನ್ನು ತೆಗೆದುಕೊಳ್ಳಲಾಯಿತು ಮತ್ತು ಅವರನ್ನು ಚಿಂದ್ವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ: ಕಾರ್ ಅಪಘಾತ ಮೂವರು ಶಿಕ್ಷಕರಿಗೆ ಗಂಭೀರ ಗಾಯ

ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ…

ದೇಶದಲ್ಲಿ ಕೊರೊನಾ ಚೇತರಿಕೆ – ಕೇಂದ್ರ ಆರೋಗ್ಯ ಇಲಾಖೆ!

ದೇಶದಲ್ಲಿ ಕೊರೊನಾ ಚೇತರಿಕೆ ಕಾಣುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…