ಧಾರವಾಡ:ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಬಂದ ಗರ್ಭಿಣಿಯರು ಕಾದು ಕಾದು ಸುಸ್ತಾದ ಘಟನೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಸದ್ಯ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಜಿಲ್ಲಾಡಳಿತ ಈ ಕುರಿತು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿನ ಗರ್ಭಿಣಿಯರನ್ನು ಕೊರೊನಾ ಟೆಸ್ಟ್ ಮಾಡಿಸಲು ಕರೆದುಕೊಂಡು ಬಂದಿದ್ದರು.

ಆದರೆ, ಗರ್ಭಿಣಿಯರನ್ನು ಪರೀಕ್ಷೆ ಮಾಡದೆ, ಆಸ್ಪತ್ರೆ ಸಿಬ್ಬಂದಿ ಅವರನ್ನು ಕಾದು ಕುಳಿತುಕೊಳ್ಳುವಂತೆ ಮಾಡಿದ್ದಾರೆ. ಇದರಿಂದಾಗಿ ಗರ್ಭಿಣಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸ್ವ್ಯಾಬ್ ಕೇಂದ್ರದ ಎದುರು ನಿಲ್ಲುವುದಕ್ಕೂ ಸಹ ಸೂಕ್ತ ಸ್ಥಳ ಇಲ್ಲ. ಹೀಗಾಗಿ ಗರ್ಭಿಣಿಯರು ಬಿಸಿಲಿನಲ್ಲಿಯೇ ಬೆಳಿಗ್ಗೆಯಿಂದ ಕಾದು ಕುಳಿತುಕೊಳ್ಳುವಂತಾಗಿತ್ತು.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ರಾಮಮಂದಿರ ಶಿಲಾನ್ಯಾಸ ಎಂದೋ ಆಗುತ್ತಿತ್ತು…!

ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ…

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.