ಭುವನೇಶ್ವರ್: ಕೊರೊನಾ ಮಹಾಮಾರಿಯ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಸದ್ಯ ಜನರ ಪ್ರತಿಯೊಂದು ಕಾರ್ಯಕ್ಕೂ ಅಡ್ಡಿಯಾಗಿದೆ.

ಇಲ್ಲೊಂದು ಜೋಡಿಗೂ ಇದು ಅಡ್ಡವಾದ ಪ್ರಸಂಗ ನಡೆದಿದೆ. ಪ್ರೀತಿಸಿ ಓಡಿಹೋದ ಜೋಡಿಯೊಂದು ಕ್ವಾರಂಟೈನ್ ಕೇಂದ್ರದಲ್ಲಿ ಮದುವೆಯಾದ ಘಟನೆ ಒಡಿಶಾದಲ್ಲಿ ನಡೆದಿದೆ.

ಈ ನವ ಜೋಡಿ ಜನೇವರಿಯಲ್ಲಿಯೇ ತಮ್ಮ ಮನೆಯಿಂದ ಓಡಿ ಬಂದಿದ್ದರು. ಪುರಿ ಜಿಲ್ಲೆಯ ಸಗದ ಗ್ರಾಮದ ಸೌರಭ್ ದಾಸ್(19) ಭಾನುವಾರ ತನ್ನ ಪ್ರಿಯತಮೆ ಪಿಂಕ್ಯಾರಾಣಿ ದಾಸ್ ಳನ್ನು 14 ದಿನಗಳ ಕ್ವಾರಂಟೈನ್ ಮುಗಿಸಿ ಕೇಂದ್ರದಲ್ಲಿಯೇ ಮದುವೆಯಾಗಿದ್ದಾನೆ. ಯುವಕನ ಮೇಲೆ ಯುವತಿ ಕುಟುಂಬಸ್ಥರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.

ಸೌರಭ್ ಅಹಮದಾಬಾದ್ ನಲ್ಲಿ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಕೊರೊನಾ ಹೆಮ್ಮಾರಿಯಿಂದ ಲಾಕ್ ಡೌನ್ ಆದ ಪರಿಣಾಮ ಕೆಲಸ ಇರಲಿಲ್ಲ. ಹೀಗಾಗಿ ಇಬ್ಬರು ಮತ್ತೆ ತಮ್ಮ ತಾಯ್ನಾಡಿಗೆ ಬರಲು ಕಷ್ಟಪಡುತ್ತಿದ್ದರು. ಹೇಗೋ ಕಷ್ಟಪಟ್ಟು ಕೊನೆಗೂ ಜೋಡಿ ತಮ್ಮ ಗ್ರಾಮಕ್ಕೆ ವಾಪಸ್ಸಾಗಿತ್ತು. ಈ ವೇಳೆ ಅವರನ್ನು ಕೂಡಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?

ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಕೊರೊನಾ ಹೆಸರಲ್ಲಿ ನಡೆಯುತ್ತಿದೆಯೇ ಲೂಟಿ?

ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್…

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಸೀಡಿ ಪ್ರಕರಣ : ಸಂತ್ರಸ್ತೆಗೆ ಗ್ರಾಮಸ್ಥರ ಬೆಂಬಲ

ಮಾಜಿ ಸಚಿವರ ಸಿ.ಡಿ.ಪ್ರಕರಣದ ಸಂತ್ರಸ್ತ ಯುವತಿಗೆ ತಂದೆಯ ಊರಿನಿಂದ ಬೆಂಬಲ ವ್ಯಕ್ತವಾಗಿದೆ.