ಬೆಂಗಳೂರು : ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲ ರೈತರಿಗೆ ರೂ.5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೊದಲು ಮೆಕ್ಕೆಜೋಳ ಬೆಳೆದ ರೈತರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಈ ಘೋಷಣೆಗೆ ಇನ್ನುಳಿದ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಎಲ್ಲ ರೈತರಿಗೂ ರೂ. 5 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕ್ಷೌರಿಕರು, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಪರಿಹಾರ ನೀಡಲು ವಿಧಿಸಲಾಗಿದ್ದ ಷರತ್ತುಗಳನ್ನು ಸಡಿಲಿಸಲಾಗಿದೆ. ಎಲ್ಲ ಚಾಲಕರಿಗೂ ಪರಿಹಾರ ನೀಡಲು ನಿರ್ಧರಿಸಲಾಗಿದೆ.

1 comment
Leave a Reply

Your email address will not be published. Required fields are marked *

You May Also Like

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…