ಬೆಂಗಳೂರು: ಪಕ್ಷಾಂತರ ನಿಷೇಧ ಕಾಯಿದೆ ನಿಯಮಗಳ ಮರುಪರಿಶೀಲನೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು ಭಾಗವಹಿಸಿದ್ದರು. ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗಿರಬೇಕಾದರೆ ಪಕ್ಷಾಂತರವೆಂಬ ಪಿಡುಗು ನಿರ್ಮೂಲನೆ ಆಗಬೇಕು. ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಪಕ್ಷಾಂತರ ಮಾಡುವ ಶಾಸಕರನ್ನು ಅನರ್ಹಗೊಳಿಸುವ ಸಭಾಧ್ಯಕ್ಷರ ಅಧಿಕಾರವನ್ನು ಕಸಿದು ಬೇರೆ ಸಂಸ್ಥೆ ಅಥವಾ ವ್ಯಕ್ತಿಗೆ ನೀಡಿದರೆ ನ್ಯಾಯ ಸಿಗುವ ವಿಶ್ವಾಸವಿರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಕ್ಷಾಂತರ ಎಂಬುದು ಸಂವಿಧಾನ ಬಾಹಿರವಾದದ್ದು. ಪಕ್ಷಾಂತರಿಗಳನ್ನು ಅನರ್ಹಗೊಳಿಸುವಂತೆ ಯಾರಾದರೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸುವಂತೆ ನೋಡಿಕೊಳ್ಳಬೇಕು. 2-3 ತಿಂಗಳೊಳಗೆ ಅರ್ಜಿ ವಿಲೇವಾರಿ ಆಗುವಂತೆ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷಾಂತರದ ಮೂಲಕ ಚುನಾಯಿತ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಮತದಾರರಿಗೆ ಮಾಡುವ ದ್ರೋಹ. ಹೀಗಾಗಿ ಅನರ್ಹರಾದವರು ಹತ್ತು ವರ್ಷ, ಅಂದರೆ ಎರಡು ಅವಧಿಗೆ ಚುನಾವಣೆಗೆ ಸ್ಪರ್ಧೆ ಮಾಡದಂತೆ, ಜೊತೆಗೆ ಯಾವುದೇ ರೀತಿಯಲ್ಲೂ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಸಲಹೆ ನೀಡಿದ್ದಾರೆ.
ಅನರ್ಹರಾದವರು ಮರು ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾದರೆ ನೈತಿಕತೆ ಉಳಿಯುತ್ತದೆಯೇ? ಹತ್ತು ವರ್ಷಗಳ ಕಾಲ ಅಂಥವರು ಸದನವನ್ನೇ ಪ್ರವೇಶ ಮಾಡಬಾರದು. ಹಾಗಾಗಿ ನಿಯಮಾವಳಿಗಳಲ್ಲಿ ಬದಲಾವಣೆ ತರುವುದರ ಜೊತೆಗೆ ಚುನಾವಣಾ ಪ್ರಕ್ರಿಯೆಗಳಲ್ಲಿಯೂ ಸುಧಾರಣೆ ತರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಪ್ರಬುದ್ಧ ಜಾಣತನದ ನಿಲುವು ಪ್ರಕಟಿಸಲು ಪ್ರಧಾನಿಗೆ ಪತ್ರ

ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಟಿ.ಈಶ್ವರ ಬಹಿರಂಗ ಪತ್ರ ಬರೆದಿದ್ದಾರೆ.

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.