ಹಾವೇರಿ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಇಂದು ಕೊರೊನಾ ವೈರಸ್ ಸೋಂಕು ತಗುಲಿದೆ. ಎರಡು ವರ್ಷದ ಮಗು ಹಾಗೂ ಮಗುವಿನ ತಂದೆ, ತಾಯಿ ಸೇರಿದಂತೆ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ 89 ಜನ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಾಂಡಪಾಡ್ವಾದ ಕಲ್ವಾದಲ್ಲಿ ಬೀದಿ ವ್ಯಾಪಾರ ಮಾಡಿಕೊಂಡಿದ್ದರು. ಅವರು ಇತ್ತೀಚೆಗೆ ಆಗಮಿಸಿದ್ದರು. ಇವರನ್ನು ರಾಣೆಬೆನ್ನೂರು ತಾಲೂಕಿನ ಮಾಕನೂರಿನ ಎರಡು ಸರ್ಕಾರಿ ವಸತಿ ನಿಲಯಗಳು ಹಾಗೂ ರಾಣೆಬೆನ್ನೂರು ನಗರದ ಒಂದು ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮಾಕನೂರಿನ ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ಎರಡು ವರ್ಷದ ಗಂಡು ಮಗು, ಮಗುವಿನ 34 ವರ್ಷದ ತಂದೆ, 28 ವರ್ಷದ ತಾಯಿ ಹಾಗೂ 22 ವರ್ಷದ ಯುವಕನಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಇಂದು ಕೇವಲ ನಾಲ್ವರ ವರದಿ ಬಂದಿದ್ದು, ನಾಲ್ವರಲ್ಲೂ ಸೋಂಕು ದೃಢಪಟ್ಟಿದೆ. ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ನಾಲ್ವರನ್ನೂ ಕ್ವಾರಂಟೈನ್ ಕೇಂದ್ರದಿಂದ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ

ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.