ಹಾವೇರಿ ಜಿಲ್ಲೆಯ ಒಂದೇ ಕುಟುಂಬದ ನಾಲ್ವರಲ್ಲಿ ಸೋಂಕು!

ಹಾವೇರಿ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಇಂದು ಕೊರೊನಾ ವೈರಸ್ ಸೋಂಕು ತಗುಲಿದೆ. ಎರಡು ವರ್ಷದ ಮಗು ಹಾಗೂ ಮಗುವಿನ ತಂದೆ, ತಾಯಿ ಸೇರಿದಂತೆ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ 89 ಜನ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಾಂಡಪಾಡ್ವಾದ ಕಲ್ವಾದಲ್ಲಿ ಬೀದಿ ವ್ಯಾಪಾರ ಮಾಡಿಕೊಂಡಿದ್ದರು. ಅವರು ಇತ್ತೀಚೆಗೆ ಆಗಮಿಸಿದ್ದರು. ಇವರನ್ನು ರಾಣೆಬೆನ್ನೂರು ತಾಲೂಕಿನ ಮಾಕನೂರಿನ ಎರಡು ಸರ್ಕಾರಿ ವಸತಿ ನಿಲಯಗಳು ಹಾಗೂ ರಾಣೆಬೆನ್ನೂರು ನಗರದ ಒಂದು ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮಾಕನೂರಿನ ಸರ್ಕಾರಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದ ಎರಡು ವರ್ಷದ ಗಂಡು ಮಗು, ಮಗುವಿನ 34 ವರ್ಷದ ತಂದೆ, 28 ವರ್ಷದ ತಾಯಿ ಹಾಗೂ 22 ವರ್ಷದ ಯುವಕನಿಗೆ ಕೊರೊನಾ ಸೋಂಕು ಕಂಡು ಬಂದಿದೆ.

ಇಂದು ಕೇವಲ ನಾಲ್ವರ ವರದಿ ಬಂದಿದ್ದು, ನಾಲ್ವರಲ್ಲೂ ಸೋಂಕು ದೃಢಪಟ್ಟಿದೆ. ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ನಾಲ್ವರನ್ನೂ ಕ್ವಾರಂಟೈನ್ ಕೇಂದ್ರದಿಂದ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version