ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ ಚಪ್ಪಾಳೆ ತಟ್ಟುವುದರ ಮೂಲಕ ಬಿಳ್ಕೊಡಲಾಯಿತು.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಬಿ ದಾನರೆಡ್ಡಿ, ಮಾತನಾಡಿ ಪಿ-1174 ಎಂಬ 20 ವರ್ಷದ ಮಹಿಳೆ ಹೊರ ರಾಜ್ಯವಾದ ಮಹಾರಾಷ್ಟ್ರದಿಂದ ಹಾಗೂ ಪಿ-1175 ಕೇಸ್ 25 ವರ್ಷದ ಪುರುಷ ಚೆನ್ನೈನಿಂದ ಜಿಲ್ಲೆಗೆ ಆಗಮಿಸಿದ ಕಾರಣ ಇವರಿಬ್ಬರನ್ನು ಕ್ವಾರಂಟೈನ್‌ಗೆ ಒಳಪಡಿಸಿ ಮೇ.15 ರಂದು ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಸೊಂಕು ದೃಡಪಟ್ಟಿತ್ತು. ಇವರಿಗೆ 14 ದಿನಗಳ ಕಾಲ ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಮೇ.27 ರಂದು ಮತ್ತೊಮ್ಮೆ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರ ವರದಿ ನೆಗೆಟಿವ್ ಬಂದಿದ್ದು ಅವರನ್ನು ಬಿಡುಗಡೆ ಮಾಡಲಾಯಿತು ಎಂದರು.
ಈ ಸಂದರ್ಭದಲ್ಲಿ ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ್ ಇಟಗಿ, ಡಾ.ಉಮೇಶ್ ರಾಜು ಹಾಗೂ ಜಿಲ್ಲಾ ಆಸ್ಪತ್ರೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
1 comment
ಕೋರೊನಾ ವಾರಿಯರ್ಸ್ ವೈದ್ಯಕೀಯ ಸಿಬ್ಬಂದಿಗಳಿಗೆ ಅನಂತ ಧನ್ಯವಾದಗಳು