ಬೆಂಗಳೂರು: ತ್ರಿವಳಿ ತಲಾಖ್, 370ವಿಧಿ ರದ್ದು, ಪೌರತ್ವ ತಿದ್ದುಪಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ವೇದಿಕೆ, ಸುಧಾರಣಾ ಕ್ರಮಗಳೂ ಸೇರಿದಂತೆ ಅನೇಕ ವಿಕ್ರಮಗಳನ್ನು ಸಾಧಿಸಲಾಗಿದೆ. ಕೋವಿಡ್19 ಬಿಕ್ಕಟ್ಟನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಮೋದಿಯವರು ಭಾರತದ ವರ್ಚಸ್ಸನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ.
ಎನ್‍.ಡಿ.ಎ. ಸರ್ಕಾರ ಎರಡನೇ ಅವಧಿಯ ಮೊದಲನೇ ವರ್ಷ ಪೂರೈಸಿರುವ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ, 2ನೆಯ ಅವಧಿಯ ಮೋದಿ ಸರ್ಕಾರ 1 ವರ್ಷ ಯಶಸ್ವಿಯಾಗಿ ಪೂರೈಸಿದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟ ಸಹೋದ್ಯೋಗಿಗಳಿಗೆ ಅಭಿನಂದನೆಗಳು. ಅಭೂತಪೂರ್ವ ಜನಾದೇಶದೊಂದಿಗೆ, ‘ದೇಶ ಮೊದಲು’ ಎನ್ನುವ ಬದ್ಧತೆಯಿಂದ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರ, ತನ್ನ ಸಾಮರ್ಥ್ಯ, ಸಾಧನೆಗಳಿಂದ ಎಲ್ಲರ ವಿಶ್ವಾಸಗಳಿಸುತ್ತಾ ಮುನ್ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಏಕಾಏಕಿ ಇಂಗ್ಲೆಂಡ್ ಆಟಗಾರರ ತೂಕ ಇಳಿಕೆ!

ಭಾರತದ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ತಂಡ ಸೋತು ಹೈರಾಣಾಗಿರುವುದು ಕೇವಲ ಕ್ರೀಡೆಯಲ್ಲಿ ಅಷ್ಟೇ ಅಲ್ಲ ಇಂಗ್ಲೆಂಡ್ ಕ್ರೀಡಾಪಟುಗಳೂ ಹೈರಾಣಾಗಿದ್ದಾರೆ.

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…