ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಬೆಳಗಾವಿ:  ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು ದಿನದಿಂದ ದಿನಕ್ಕೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಾಗುತ್ತಿದೆ. ಸರ್ಕಾರದಲ್ಲಿ ವಲಸಿಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಶಾಸಕರು ಅಸಮಾಧನಗೊಂಡಿದ್ದಾರೆ. ಇದು ಬಿಜೆಪಿ ಆಂತರಿಕ ವಿಚಾರವಾಗಿದ್ದು ಎಲ್ಲಿಗೆ ಹೋಗಿ ನಿಲ್ಲಲಿದೆ ಎಂದು ಕಾದು ನೋಡಬೇಕು ಎಂದರು.

ಬಿಜೆಪಿಯಲ್ಲಿ ಮೂರು ಬಣ

ಬಿಜೆಪಿ ಪಕ್ಷದಲ್ಲಿ ಒಟ್ಟು ಮೂರು ಬಣಗಳು ಇವೆ. ಕಾಂಗ್ರೆಸ್​​ನಿಂದ ಬಿಜೆಪಿಗೆ ಹೋಗಿರುವವರ ಒಂದು ಗುಂಪು. ಸಂಘ ಪರಿವಾರದಿಂದ ಬಂದಿರುವ ಬಿಜೆಪಿ ಶಾಸಕರದ್ದು ಮತ್ತೊಂದು ಗುಂಪು, ಹಾಗೂ ಜನತಾ ಪರಿವಾರದಿಂದ ಬಿಜೆಪಿಗೆ ಹೋಗಿರುವ ಶಾಸಕರ ಇನ್ನೊಂದು ಗುಂಪು ಇದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಇನ್ನೂ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಿತ್ತೇನೆ ಎಂದ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್​ನಿಂದ ಯಾರೊಬ್ಬರೂ ಬಿಜೆಪಿಗೆ ಹೋಗಲ್ಲ. ಈಗ ಎಲ್ಲ ಸಚಿವ ಸ್ಥಾನಗಳು ಭರ್ತಿಯಾಗಿದ್ದು, ಬಂದವರಿಗೆ ಏನ್ ಕೊಡ್ತಾರೆ? ಕೇವಲ ಶಾಸಕರಾಗಿ ಉಳಿಯೋಕೆ ಬಿಜೆಪಿಗೆ ಏಕೆ ಹೋಗಬೇಕು ಎಂದು ಟಾಂಗ್‌ ಕೊಟ್ಟಿದ್ದಾರೆ. ಕಾಂಗ್ರೆಸ್​ನಿಂದ ಯಾವುದೇ ಆಪರೇಷನ್ ನಡೆಸಲ್ಲ. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡುವಷ್ಟು ಬ್ಯಾಂಕ್ ಬ್ಯಾಲೆನ್ಸ್ ನಮ್ಮ ಬಳಿ ಇಲ್ಲ ಎಂದು ವ್ಯಂಗ್ಯ ಮಾಡಿದರು.

Exit mobile version