ಬೆಂಗಳೂರು:ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ನಿಡಿದ ಹೇಳಿಕೆ ಪ್ರತಿಕ್ರಿಸಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಬೆಂಕಿ ಬಿದ್ದಿದೆ. ಯಡಿಯೂರಪ್ಪ ಬಗ್ಗೆ ಯತ್ನಾಲ್ ನೀಡಿದ ಹೇಳಿಕೆ ಅರ್ಥವೇನು? ಬಿಜೆಪಿಯ ಆಂತರಿಕ ಭಿನ್ನಮತದಲ್ಲಿ ಕಾಂಗ್ರೆಸ್ ಕೈ ಹಾಕುವುದಿಲ್ಲ. ಅವರ ಕಚ್ಚಾಟದಿಂದ ಸರ್ಕಾರ ಹೋದರೆ ನಾವು ಜವಾಬ್ದಾರರಲ್ಲ. ಇಂಥ ಕೆಟ್ಟ ಸರ್ಕಾರ ಎಂದೂ ಬಂದಿರಲಿಲ್ಲ ಎಂದು ಕಿಡಿಕಾರಿದರು.

ಉಮೇಶ್ ಕತ್ತಿಯವರು ನನ್ನನ್ನು ಭೇಟಿಯಾಗಲು ಪ್ರಯತ್ನ ಮಾಡಿದರು ಎಂಬುದು ಊಹಾಪೋಹ. ಅವರು ನನ್ನ ಸ್ನೇಹಿತರು. ನನ್ನ ಮತ್ತು ಅವರ ಮಧ್ಯೆ ಗೆಳೆತನ, ವಿಶ್ವಾಸ ಇದೆ. ಆದರೆ ಅವರು ನನ್ನನ್ನು ಭೇಟಿಯಾಗುವ ಪ್ರಯತ್ನ ಮಾಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.