ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ – ಸರ್ಕಾರ!

ನವದೆಹಲಿ: ಕೇಂದ್ರ ಸರ್ಕಾರದ ನೂತನ ಲಾಕ್ಡೌನ್ ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿದೆ.

ಜೂ. 1ರಿಂದ ಯಾವುದೇ ಪಾಸ್ ಇಲ್ಲದೇ ಪ್ರಯಾಣಿಕರು ಸಂಚರಿಸಬಹುದು. ಹೊರ ರಾಜ್ಯಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿಯೇ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಸಹ 141 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕರ್ನಾಟಕ ಸೋಂಕಿತರ ಸಂಖ್ಯೆಯಲ್ಲಿ ಮೂರು ಸಾವಿರದ ಗಡಿಯ ಸಮೀಪದಲ್ಲಿದೆ.

ಜನರು ಪಾಸ್ ಪಡೆದು ಬರುತ್ತಿರುವುದರಿಂದ ಎಲ್ಲರ ಮಾಹಿತಿ ಸಿಗುತ್ತಿತ್ತು. ಪಾಸ್ ಇಲ್ಲದೇ ಜನರ ಸಂಚರಿಸಬಹುದು ಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಸೂಚಿಸಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Exit mobile version