ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ಇಳಕಲ್ ನಿಂದ ಹುಬ್ಬಳ್ಳಿಗೆ ಬರುವಾಗ ಕುಳಗೇರಿ ಕ್ರಾಸ್ ನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕರೊಬ್ಬರು ರೂ. 10 ಸಾವಿರ ಇದ್ದ ಪರ್ಸನ್ನು ಬಸ್ ನಲ್ಲಿಯೇ ಬಿಟ್ಟು ಹೋಗಿದ್ದರು. ಇದನ್ನು ಮರಳಿ ಮಾಲೀಕರಿಗೆ ತಲುಪಿಸಿ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಬಸ್ನೆಲ್ಲಿ ಪ್ರಯಾಣಿಸುವವರು ಹೆಸರು, ದೂರವಾಣಿ ಸಂಖ್ಯೆ ಹಾಗೂ ಪ್ರಯಾಣದ ಸ್ಥಳಗಳನ್ನು ನಮೂದಿಸುವುದು ಕಡ್ಡಾಯವಾಗಿದೆ. ಇದೇ ಮಾಹಿತಿ ಆಧಾರದ ಮೇಲೆ ಬಸ್ ಚಾಲಕ ಆರ್.ಎನ್.ಮಾಳವಾಡ ಮತ್ತು ನಿರ್ವಾಹಕ ಆರ್.ಡಿ.ದೇಗಾಂವಕರ್ ಕಳೆದುಕೊಂಡವರ ಹಣ ತಲುಪಿಸಿದ್ದಾರೆ.

ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿ ಘಟಕಕ್ಕೆ ಕರೆಸಿಕೊಂಡು ಮೇಲಾಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿ, ಖಚಿತಪಡಿಸಿಕೊಂಡು ಹಣವಿದ್ದ ಪರ್ಸ್ ನ್ನು ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.