ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.
ಕೇಂದ್ರ ಸರ್ಕಾರ ಜೂನ್ 8ರಿಂದ ದೇವಸ್ಥಾನ ತೆರೆಯಲು ಸೂಚಿಸಿದೆ.
ಹೀಗಾಗಿ ನಾವು ಕೇಂದ್ರದ ಆದೇಶ ಪಾಲಿಸುತ್ತೇವೆ ಎಂದರು.
ರಾಜ್ಯದ ಎಲ್ಲಾ ದೇವಾಲಯಗಳು ಜೂ.8 ಕ್ಕೆ ತೆರೆಯಲಿವೆ. ಧಾರ್ಮಿಕ ದತ್ತಿ ಇಲಾಖೆ ಹೊರತಾದ ದೇವಸ್ಥಾನಗಳು ಜೂ.8 ರಿಂದ ಆರಂಭವಾಗಲಿವೆ.
ದೇವಸ್ಥಾನದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧ ರಿಸುವುದು, ಸ್ವಚ್ಛತೆಗೆ ಆದ್ಯತೆ ಕಡ್ಡಾಯವಾಗಿದೆ.
ಗರ್ಭಗುಡಿಯೊಳಗೆ ಅರ್ಚಕರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು.
ಗರ್ಭಗುಡಿಯ ಒಳಗೆ ಪ್ರವೇಶಿಸಿ ಮುಟ್ಟಿ ಪೂಜೆ ಮಾಡುವ ಅವಕಾಶ ಇಲ್ಲ ಎಂದರು.
ವಿಸ್ತೃತವಾದ ಮಾರ್ಗಸೂಚಿ ಶೀಘ್ರವೇ ಬಿಡುಗಡೆ ಮಾಡ್ತೇವೆ. ಖಾಸಗಿ ದೇವಾಲಯ, ಮಠ ತೆರೆಯುವುದು ಅವರ ವಿವೇಚನೆಗೆ ಬಿಟ್ಟ ವಿಚಾರ.
ದೇವಾಲಯಗಳಲ್ಲಿ ಗಂಧ, ಕುಂಕುಮ ನೀಡಲಾಗುವುದು. ತೀರ್ಥ ಪ್ರಸಾದ ನೀಡುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.
ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಧಾರ್ಮಿಕ ಸಮಾರಂಭ ಹಾಗೂ ಜಾತ್ರೆಗೆ ಅವಕಾಶ ಇಲ್ಲ. ಲಾಕ್ಡೌನ್ ನಿಂದ ಮುಜರಾಯಿ ದೇವಸ್ಥಾನಗಳಿಗೆ ನಷ್ಟವಾಗಿದೆ. ಶೇ.30 ಕ್ಕೂ ಅಧಿಕ ಆದಾಯಕ್ಕೆ ಕಡಿವಾಣ ಬಿದ್ದಿದೆ. ಏಪ್ರಿಲ್-ಮೇ ತಿಂಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗಿದೆ ಎಂದರು.