ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ ಹೊರಡಿಸಿದೆ. ಈ ಮೂಲಕ ಈ ಸಮುದಾಯಗಳಿಗೆ ಸೇರಿದ ಜನರ ಬಹುದಿನಗಳ ಬೇಡಿಕೆಯೊಂದು ಈಡೇರಿದಂತಾಗಿದೆ. ಇನ್ನು ಮುಂದೆ ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈ ಸಮುದಾಯದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಅವಕಾಶಗಳು ವಿಸ್ತರಿಸಲಿವೆ.

ಕರ್ನಾಟಕ ಸರ್ಕಾರ ಹೊರಡಿಸಿದ ಗೆಜೆಟ್

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪರಿವಾರ, ತಳವಾರ, ಸಿದ್ದಿ ಸಮುದಾಯಗಳನ್ನು ವಿಳಂಬವಾಗಿಯಾದರೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಗೆಜೆಟ್ ಆದೇಶ ಹೊರಡಿಸಿರುವ @CMofKarnataka ಅವರಿಗೆ ಧನ್ಯವಾದಗಳು. ಹಿಂದೆ ನಮ್ಮ ಸರ್ಕಾರ ಈ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಿ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಟ್ಟಿತ್ತು. ಸಹಕರಿಸಿದ ಎಲ್ಲರಿಗೂ ವಂದನೆಗಳು! ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.