ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಯ್ದೆ ತಿದ್ದುಪಡಿಗೆ ನನ್ನ ಸಂಪೂರ್ಣ ವಿರೋಧವಿದೆ. ಕರ್ನಾಟಕಕ್ಕೆ ವಿದ್ಯುತ್‌ನ ಸಮರ್ಥ ನಿರ್ವಹಣೆಯ ಸಾಮರ್ಥ್ಯ ಇದೆ. ತಿದ್ದುಪಡಿಯು ಜಾರಿಗೆ ಬಂದರೆ ಕೆಲವೇ ಕೆಲವು ವ್ಯಕ್ತಿಗಳ ನಿಯಂತ್ರಣಕ್ಕೆ ವಿದ್ಯುತ್‌ ಕ್ಷೇತ್ರ ಒಳಪಡುತ್ತದೆ. ವಿದ್ಯುತ್‌ ದರ ನಿಗದಿಯೂ ಅವರ ಇಚ್ಛೆಯಂತೆಯೇ ನಡೆದು, ದರ ಅಧಿಕವಾಗುತ್ತದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಜನರಿಗೆ ಬೆಲೆ ಏರಿಕೆ ಬರೆಯ ಜೊತೆಗೆ 70 ವರ್ಷಗಳಿಂದ ಕಟ್ಟಿ ಬೆಳೆಸಿದ ವಿದ್ಯುತ್ ಇಲಾಖೆಯನ್ನು ಹಾಳು ಮಾಡಲು ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಕೆಟ್ಟ ಬೆಳವಣಿಗೆ. ಇಂತಹ ಪ್ರಯತ್ನಕ್ಕೆ ಅವಕಾಶ ಕೊಡಕೂಡದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…

ಅಗ್ನಿ ಅವಘಡ ತಪ್ಪಿದ ಬಾರಿ ದುರಂತ

ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಸ್ಪರ್ಶಗೊಂಡು ಹೊಟ್ಟಿನ ಬಣವಿ ಸುಟ್ಟು ಕರಕಲಾದ ಘಟನೆ ಜರುಗಿದೆ.

ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ರಾಮಣ್ಣ

ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಿಗೆ ಸುಗಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…