ಲಕ್ಷ್ಮೇಶ್ವರ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಮದ್ಯಾಹ್ನದ ವೇಳೆ ಇಲ್ಲಿನ ಸವಣೂರ್ ರಸ್ತೆಯಲ್ಲಿರುವ ಮಾಲತೇಶ್ ಹತ್ತಿ ಗಿರಣಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ. ಮಾಲತೇಶ್ ಹೊಳಲಾಪೂರ್ ಅವರಿಗೆ ಸೇರಿದ ಹತ್ತಿ ಗಿರಣಿ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂಧಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು ಎಂದು ತಿಳಿದು ಬಂದಿದೆ.
