ಹೈದರಾಬಾದ್: ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆ ಜಿಲ್ಲೆಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ಶಾಲಾ, ಕಾಲೇಜು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ. ಹೀಗಾಗಿ ಸಂತ್ರಸ್ತೆ ತನ್ನ ಮನೆಗೆ ಮರಳಿದ್ದಳು.

35 ವರ್ಷದ ಆರೋಪಿ ತಂದೆ ದೈನಂದಿನ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆರೋಪಿ ಈಗಾಗಲೇ ನಾಲ್ಕು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿಗೆ ಡಿವೋರ್ಸ್ ನೀಡಿದ್ದ. ಮೂರನೇ ಪತ್ನಿ ಮೃತಪಟ್ಟಿದ್ದಳು. ಸಂತ್ರಸ್ತೆ ಮೂರನೇ ಹೆಂಡತಿಯ ಮಗಳಾಗಿದ್ದಾಳೆ. ಆರೋಪಿ ಪ್ರಸ್ತುತ ತನ್ನ ತಾಯಿ, ನಾಲ್ಕನೇ ಪತ್ನಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಮನೆಗೆ ಹಿಂದಿರುಗಿದ ನಂತರ ಲಾಕ್‍ಡೌನ್ ಸಂದರ್ಭದಲ್ಲಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆರೋಪಿಯ ಈ ಕೃತ್ಯದ ಬಗ್ಗೆ ಕುಟುಂಬದವರಿಗೆ ಗೊತ್ತಿರಲಿಲ್ಲ. ಆರೋಪಿ ತಂದೆ ಮನೆಯಲ್ಲಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ ಸಂತ್ರಸ್ತೆ ಈ ವಿಚಾರವನ್ನು ಯಾರಿಗೂ ಹೇಳಿಲ್ಲ. ಆದರೆ ಇತ್ತೀಚೆಗೆ ಮತ್ತೆ ಆರೋಪಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊನೆಗೆ ಸಂತ್ರಸ್ತೆ ತನ್ನ ಚಿಕ್ಕಮ್ಮನಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಆಗ ಮಲತಾಯಿ ಪೊಲೀಸ್ ಠಾಣೆಗೆ ಹೋಗಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ ದಾಖಲೆಯ ಸೋಂಕಿತರನ್ನು ಹೊಂದಿದ ಭಾರತ!

ಬೆಂಗಳೂರು: ವಿಶ್ವ ಸೇರಿದಂತೆ ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಾಮಾರಿ ಸೋಂಕಿತರ ಸಂಖ್ಯೆ…

ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್

ವಿಲಕ್ಷಣ ಘಟನೆಯೊಂದರಲ್ಲಿ, ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.

ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.