ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ ಈ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಗಣಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.
ಈ ಕುರಿತು ಗದಗನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಆಧಾರ ರಹಿತ ಆರೋಪ ಮಾಡಿದರೆ, ನಾನು ಕೂಡ ಮೂಲತ: ಬೆಳಗಾವಿಯವನೆ. ಬೆಳಗಾವಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ, ಸ್ಥಾಯಿ ಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಬಳಿಯೂ ಕೂಡ ಸತೀಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಲು ಬ್ಲ್ಯಾಕ್ ಆಂಡ್ ವೈಟ್ ಅಲಿಗೇಶನ್ ಗಳು ಸಾಕಷ್ಟಿವೆ ಎಂದು ಕಿಡಿಕಾರಿದರು.

Leave a Reply

Your email address will not be published.

You May Also Like

ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು

ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.

ಮದ್ಯದ ಅಮಲಿನಲ್ಲಿ ಮಡದಿಯ ಕೊಲೆ!

ಮದ್ಯದ ಮತ್ತಿನಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಡೇ ಲಾಕ್ ಡೌನ್ ಸಂಕಟ: ಕಂಗಾಲಾದ ಕಾಗೆಗಳಿಗೆ ಖಾರಾ-ಡಾಣಿ ಊಟ

ಸಂಡೇ ಲಾಕ್ ಡೌನ್ ಸಂದರ್ಭದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಹೊಟೆಲ್ ಮಾಲೀಕರೊಬ್ಬರು ಖಾರಾ-ಡಾಣಿ ನೀಡಿ ಮಾನವೀಯತೆ ಮೆರೆದಿದ್ದಾರೆ.