ಶಿವಮೊಗ್ಗ: ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ಮೊದಲು ಹೊರ ರಾಜ್ಯಗಳಿಂದ ಜಿಲ್ಲೆಗೆ ಭೇಟಿ ನೀಡಿದವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಇದೀಗ ಬೆಂಗಳೂರಿನ ಪಾದರಾಯನಪುರ ಹಾಗೂ ಶಿವಾಜಿನಗರ ಸಹ ಮಲೆನಾಡಿಗೆ ಕಂಟಕವಾಗಿ ಕಾಡುತ್ತಿದೆ.

ಪಾದರಾಯನಪುರದಲ್ಲಿ ಗಲಭೆ ನಡೆದಾಗ ಜಿಲ್ಲೆಯಿಂದ 22 ಜನ ಕೆಎಸ್ ಆರ್ ಪಿ ಪೊಲೀಸರು ಕರ್ತವ್ಯಕ್ಕೆ ತೆರಳಿದ್ದರು.  ಈ ಪೊಲೀಸರು ಕಳೆದ ನಾಲ್ಕು ದಿನಗಳ ಹಿಂದೆ ಮರಳಿ ಜಿಲ್ಲೆಗೆ ಆಗಮಿಸಿದ್ದರು. ಜಿಲ್ಲೆಗೆ ವಾಪಸ್ಸಾದ ಅವರಿಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಟೆಸ್ಟ್ ನಡೆಸಿ ಕ್ವಾರಂಟೈನ್ ಗೆ ಒಳಪಡಿಸಿತ್ತು. ಇಲ್ಲಿಯವರೆಗೂ 22 ಜನರ ಪೈಕಿ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ, ನಿನ್ನೆ 7 ಜನ ಪೊಲೀಸರಿಗೆ ಪಾಸಿಟಿವ್ ದೃಢಪಟ್ಟಿದೆ. ಉಳಿದ 12 ಜನರ ವರದಿ ಬರಬೇಕಿದೆ.

ಪಾಸಿಟಿವ್ ಪತ್ತೆಯಾಗಿರುವ ಎಎಸ್ಐಗೆ ಯಾವುದೇ ಟ್ರ್ಯಾವೆಲ್ ಹಿಸ್ಟರಿ ಇಲ್ಲದಿದ್ದರೂ, ಅವರು ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಳೆದ ಹಲವು ದಿನಗಳಿಂದ ಕರ್ತವ್ಯ ನಿರ್ವಹಿಸಿದ್ದರು. ಕರ್ತವ್ಯದ ವೇಳೆ ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ವಾಹನಗಳ ತಪಾಸಣೆ ನಡೆಸಿದ್ದರು. ಹೀಗಾಗಿ ಡಿಎಆರ್ ಎಎಸ್ಐಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.

ಇದೇ ಮೊದಲ ಬಾರಿಗೆ ಜಿಲ್ಲೆಯ ಆಯನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯೊಬ್ಬರಿಗೂ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಹಿಂದೆ ಶಿವಮೊಗ್ಗದ ಬಾಳೆಕೊಪ್ಪದ 63 ವರ್ಷದ ರೋಗಿ ಪಿ-1305 ವೃದ್ಧನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಕೊರೊನಾ ಪತ್ತೆಯಾಗುವ ಎರಡು ದಿನದ ಹಿಂದೆ ವೃದ್ಧ ಆಯನೂರಿನ ಆಸ್ಪತ್ರೆಯಲ್ಲಿ ಚಳಿ ಜ್ವರ ಎಂದು ಚಿಕಿತ್ಸೆಗೆ ತೆರಳಿದ್ದರು. ಆತನಿಗೆ ವೈದ್ಯೆ ಚಿಕಿತ್ಸೆ ನೀಡಿದ್ದರು. ಇದೀಗ ಚಿಕಿತ್ಸೆ ನೀಡಿದ್ದ ವೈದ್ಯೆಗೆ ಕೊರೊನಾ ತಗುಲಿದ್ದು, ಅವರನ್ನು ಸಹ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಯಾರಿಂದ ವೈದ್ಯೆಗೆ ಪಾಸಿಟಿವ್ ಕಾಣಿಸಿಕೊಂಡಿತ್ತೋ ಆ ವೃದ್ಧ ಗುಣಮುಖರಾಗಿ ಭಾನುವಾರ ಡಿಸ್ಚಾರ್ಜ್ ಕೂಡ ಆಗಿದ್ದಾರೆ.

ಡಿಎಆರ್ ಎಎಸ್ಐ.ಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಜಯನಗರ ಠಾಣೆಯನ್ನು ಸ್ಯಾನಿಟೈಸರ್ ಮಾಡಿ ಸೀಲ್ಡೌನ್ ಮಾಡಲಾಗಿದೆ. ಸೋಂಕಿತರ ಪುತ್ರಿ ಸಹ ಇದೇ ಠಾಣೆಯಲ್ಲಿ ಪೇದೆಯಾಗಿದ್ದಾರೆ. ಅವರು ತಂದೆಯ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರಬಹುದು ಎಂಬ ಕಾರಣದಿಂದ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…

ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ:ಡಾ:ರಾಕೇಶ್

ಉತ್ತರಪ್ರಭ ಸುದ್ದಿ ನರೆಗಲ್ಲ:ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ ಹಾಗೂ ದೈಹಿಕವಾಗಿ ಮಾನಸಿಕವಾಗಿ ಮನುಷ್ಯ ಯೋಗವನ್ನು ಪ್ರತಿದಿನ…

ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ