ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಗದಗ ಜಿಲ್ಲೆಯ ಮುಂಡರಗಿ ಪುರಸಭೆ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇದರಿಂದ ಮುಂಡರಗಿ ಜನರಿಗೆ ನೀರಿನ ಕರ ದುಬಾರಿಯಾಗುತ್ತಿದೆ. ಈಗಾಗಲೇ ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಪುರಸಭೆಯ ಈ ಧೋರಣೆ ವಿರೋಧಿಸಿ ಇಂದು ಕನ್ನಡ ಕ್ರಾಂತಿ ಸೇನೆ ವತಿಯಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ಆರ್ಥಿಕವಾಗಿ ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ನೀರಿನ ಕರ ಹೆಚ್ಚಿಗೆ ಮಾಡಿದ್ದರಿಂದ ಜನರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಈ ಧೋರಣೆ ಕೈಬಿಡಬೇಕು ಎಂದು ಕನ್ನಡ ಕ್ರಾಂತಿ ಸೇನೆ ಅಧ್ಯಕ್ಷ ಮಂಜು ಮುಧೋಳ್ ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಕೊರೊನಾ ಚಿಕಿತ್ಸಾ ವೆಚ್ಚಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು…

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…