ಗದಗ: ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು. ದೇಶದಲ್ಲಿ ಅತೀ ಹೆಚ್ಚು ಸೋಂಕಿತರು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದರಿಂದ ಮುಖ್ಯವಾಗಿ ಈಗಾಗಲೇ ಮಹಾರಾಷ್ಟ್ರದಿಂದ ಬಂದಿರುವ ವಲಸಿಗರಲ್ಲೆ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿರುವುದರಿಂದ ರೈಲು ನಿಲ್ದಾಣದಲ್ಲಿ ಹೆಚ್ಚು ನಿಗಾವಹಿಸಲಾಗಿತ್ತು.

ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವೈದ್ಯರು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆ ನಡೆಸಿದರು. ನಂತರ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು.

ಮುಂಬೈನಿಂದ ಜನ ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಸ್ವತಃ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಜರಿದ್ದರು. ಬಂದ ಜನರಿಗೆ ಎರಡು ಕೌಂಟರ್ ನಲ್ಲಿ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸಿಪಿಐ ಬಿ.ಎ.ಬಿರಾದಾರ ನೇತೃತ್ವದಲ್ಲಿ 25 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. 17 ಜನ ರೈಲ್ವೇ ಪೊಲೀಸ್ ಹಾಗೂ 10 ಆರ್ಪಿಎಫ್ ಪೊಲೀಸರನ್ನು ನಿಯೋಜಿಸಲಾಗಿತ್ತು.

ಎಸ್ಪಿ ಯತೀಶ್ , ಎಸಿ ರಾಯಪ್ಪ, ತಹಶಿಲ್ದಾರ ಶ್ರೀನಿವಾಸ್ ಮೂರ್ತಿ, ಉಪ ತಹಶಿಲ್ದಾರ ಸಂಜೀವ್ ಸಿಂಪರ್  ಇದ್ದರು.

Leave a Reply

Your email address will not be published. Required fields are marked *

You May Also Like

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಳೆಗಟ್ಟಿದ ಚಂದ್ರಗಿರಿ ಜಾತ್ರೆ- ಎಲ್ಲೆಲ್ಲೂ ಜನ ಸಾಗರ ಚಂದ್ರಮ್ಮನ ಸನ್ನಿಧಿಯಲ್ಲಿ ಉರುಳು ಸೇವೆ ಜೋರು

ಗುಲಾಬಚಂದ ಜಾಧವಆಲಮಟ್ಟಿ : ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರು ಜನರೋ ಜನ. ಭಕ್ತಿಭಾವದ ಲೀಲೆಯಲ್ಲಿ ಹರಿದು…

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಶಾಪಿಂಗ್ ಕಾಂಪ್ಲೆಕ್ಸ್

ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಗದಗ ಬಂದಗೆ ಕರೆ..!

ಉತ್ತರಪ್ರಭ ಗದಗ: ದಿನಾಂಕ: 26/01/2022 ರಂದು ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ ನಡೆದ ಗಣರಾಜೋತ್ಸವದ ಆಚರಣೆಯಲ್ಲಿ…