ತಿರುವನಂತಪುರ: 9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಲಪ್ಪುರಂನ ಎಸ್.ಪಿ. ಅಬ್ದುಲ್ ಕರೀಮ್, ಮಳಪ್ಪುರಂನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳಿಗೆ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇದರಿಂದ ಅಧ್ಯಯನ ನಡೆಸುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಳು ಎಂದಿದ್ದಾರೆ. ಅಲ್ಲದೇ, ಅವಳ ಕುಟುಂಬ ಆರ್ಥಿಕವಾಗಿ ಸಬಲವಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ 11,506ಕ್ಕೆ ಏರಿಕೆ

ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದೆ. ಈವರೆಗೆ ಮಹಾರಾಷ್ಟ್ರದಲ್ಲಿ ಪತ್ತೆಯಾದ ಕೊರೋನಾ ಪಾಸಿಟಿವ್ ಸಂಖ್ಯೆ ಎಷ್ಟು ಗೊತ್ತಾ..?

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63…

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.