ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬಿಎಸ್ವೈ ಪುತ್ರ ವಿಜಯೇಂದ್ರ ಅಸಂವಿಧಾನಿಕ ಸಿಎಂ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ಯಾರೇ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಸಹಜ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಇಂತಹ ಆರೋಪ ಕೇಳಿ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು
1 comment
Very good Uttar prabha good news