ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2494 ಆಗಿದೆ. ಇಂದು ಗುಣಮುಖರಾಗಿ 111 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1514 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಒಟ್ಟು ರಾಜ್ಯದಲ್ಲಿ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 250 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ. ಇಂದು ಕಲಬುರಗಿಯಲ್ಲಿ 105 ಹಾಗೂ ಉಡುಪಿಯಲ್ಲಿ 62 ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

          ಬೆಂಗಳೂರು ನಗರ – 20

          ಯಾದಗಿರಿ – 09

          ಕಲಬುರಗಿ – 105

          ಮಂಡ್ಯ – 13

          ರಾಯಚೂರು – 35

          ಉಡುಪಿ – 62

          ದಾವಣಗೆರೆ -03

          ವಿಜಯಪುರ-06

          ಕೋಲಾರ-02

          ಧಾರವಾಡ- 01

          ಬೆಂಗಳೂರು ಗ್ರಾಮೀಣ-01

          ಬಾಗಲಕೊಟೆ-02

          ಹಾಸನ – 01

ಶಿವಮೊಗ್ಗ -02

ಮೈಸೂರು-02

ಬಳ್ಳಾರಿ-01

ದಕ್ಷಿಣ ಕನ್ನಡ -02

Leave a Reply

Your email address will not be published. Required fields are marked *

You May Also Like

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಡಿಯೋಣ ಬಾ ಅಭಿಯಾನ

ಬೇಸಿಗೆ ಅವಧಿಯಲ್ಲಿ ತಾಲೂಕೀನ ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಒದಗಿಸುವ ಉದ್ದೇಶದಿಂದ ಮಹಾತ್ಮಗಾಂಧಿ ರಾಷ್ಟಿಯ ಉದ್ದಯೋಗ ಖಾತರಿ ಯೋಜನೆಯಡಿ ಮಾರ್ಚ 15 ರಿಂದ ಮೂರು ತಿಂಗಳವರೆಗೆ ದುಡಿಯೋಣ ಬಾ ಅಭಿಯಾನ ಹಮ್ಮಿಕೋಳ್ಳಲಾಗಿದೆ.

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ನರಗುಂದ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ…