ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಮುಂಬಯಿ: ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಪೈನಾಪಲ್ ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿ, ಆಕ್ರೋಶದಿಂದ ಈ ಮಾತುಗಳನ್ನು ಹೇಳಿದ್ದಾರೆ.

ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ಅವರು, ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು. ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಮನವಿ ಮಾಡಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದಾರೆ. ಆದರೆ, ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಅದು ಗಂಭೀರವಾಗಿ ಗಾಯಗೊಂಡಿತ್ತು. ಈ ಗರ್ಭಿಣಿ ಆನೆ ಯಾರೊಬ್ಬರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಂದಿ ಆನೆ ನರಳಾಡಿ, ರಸ್ತೆಯ ತುಂಬೆಲ್ಲ ಓಡಾಡಿತ್ತು.

ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋರಡ್ ಮಾಡಿದ್ದರು.

Exit mobile version