ಗದಗ: ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. P-4079 ಮೊದಲೇ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಕ್ಯಾನ್ಸರ್ ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಿದ್ದರು. ಬೆಂಗಳೂರು ನಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದ್ದರ ಪರಿಣಾಮ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಈ ರೋಗಿಯ ಹೆಂಡತಿಯನ್ನೂ ಸಹ ಬೆಂಗಳೂರು ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 37 ಕ್ಕೆ ಎರಿಕೆಯಾಗಿದ್ದು. ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 17 ಜನರು ಗುಣಮಖರಾಗಿದ್ದಾರೆ 18 ಜನ ಕೊರೊನಾ ಸಕ್ರಿಯ ಪ್ರಕರಣಗಳಲ್ಲಿ 17 ಜನ ಜಿಮ್ಸ್ನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪಾಸಿಟಿವ್ ಬಂದ ಕೇಸ್ ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.