ಗದಗ: ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. P-4079 ಮೊದಲೇ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಕ್ಯಾನ್ಸರ್ ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಿದ್ದರು. ಬೆಂಗಳೂರು ‌ನಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದ್ದರ ಪರಿಣಾಮ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಈ ರೋಗಿಯ ಹೆಂಡತಿಯನ್ನೂ ಸಹ ಬೆಂಗಳೂರು ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 37 ಕ್ಕೆ ಎರಿಕೆಯಾಗಿದ್ದು. ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 17 ಜನರು ಗುಣಮಖರಾಗಿದ್ದಾರೆ 18 ಜನ ಕೊರೊನಾ ಸಕ್ರಿಯ ಪ್ರಕರಣಗಳಲ್ಲಿ 17 ಜನ ಜಿಮ್ಸ್ನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪಾಸಿಟಿವ್ ಬಂದ ಕೇಸ್ ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 239 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5452…

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.