ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಯಾಗಿ ನಿರ್ವಹಣೆ ಮಾಡದಿದ್ದರಿಂದಲೇ ಪಕ್ಷ ಬೀಡುವು ಸನ್ನಿವೇಶ ಸೃಷ್ಟಿಯಾಯಿತು ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಆರೋಪಿಸಿದರು.
ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದ ನಾವು ಪಕ್ಷ ಬಿಡಬೇಕಾಯಿತು.
ಪಕ್ಷ ಬಿಟ್ಟ ಯಾವ ಶಾಸಕರು ಕೂಡ ಬಿದಿಯಲ್ಲಿ ಇಲ್ಲ. ನಮ್ಮನ್ನು ನೋಡಿದರೆ ಬಿದಿಯಲ್ಲಿ ಇದ್ದಾರೆ ಎಂದು ಅನಿಸುತ್ತಿದೆಯಾ? ಎಂದು ಪ್ರಶ್ನಿಸಿದರು.

ಅನ್ಯಾಯವಾಗಲು ಸಿಎಂ ಬಿಡಲ್ಲ

ಆರ್.ಶಂಕರ್, ಎಂಟಿಬಿ ನಾಗರಾಜ, ವಿಶ್ವನಾಥ ಅವರಿಗೆ ಮೋಸವಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಆರ್.ಶಂಕರ್, ಎಂಟಿಬಿ ನಾಗರಾಜ, ವಿಶ್ವನಾಥ ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಿಎಂ ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಎಂಟಿಬಿಯವರಿಗೆ ಬಚ್ಚೆಗೌಡ ಕುಟುಂಬದಿಂದ ಅನ್ಯಾಯ ಆಗಿರುವುದು ನಿಜ. ಚುನಾವಣೆಯಲ್ಲಿ ಶರತ್ ಬಚ್ಚೆಗೌಡ ಸ್ಪರ್ಧೆ ಮಾಡದಂತೆ ಪಕ್ಷ ಸೂಚಿಸಿದರೂ ಸ್ಪರ್ಧೆ ಮಾಡಿದ್ದರಿಂದ ನಾಗರಾಜ ಸೋಲಬೇಕಾಯಿತು. ಯಡಿಯೂರಪ್ಪ ಅದನ್ನು ಸರಿಪಡಿಸುವರೆಂಬ ವಿಶ್ವಾಸವಿದೆ.

ಸಿದ್ದರಾಮಯ್ಯ ಅವಧಿಯಲ್ಲಿ ರಾಕೇಶ್ ಸುಪರ್ ಸಿಎಂ ಆಗಿದ್ರು

ರಾಜ್ಯದಲ್ಲಿ ಸಂವಿಧಾನಿಕವಾಗಿ ಯಡಿಯೂರಪ್ಪ ಹಾಗೂ ಅಸಂವಿಧಾನಿಕವಾಗಿ ವಿಜಯೇಂದ್ರ ಇಬ್ಬರು ಸಿಎಂ ಗಳು ಇದ್ದಾರೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರೀಯೇಯಿಸಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಇರುವಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿಎಸ್ವೈ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ ಆರೋಪ. ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆಂದು ಹೇಳಿದರು.
ಚುನಾವಣೆ ಸಮಯದಲ್ಲಿ ನಮ್ಮ ಗೆಲುವಿಗಾಗಿ ಕುಟುಂಬ ಸದಸ್ಯರೆಲ್ಲರೂ ದುಡಿದಿರುತ್ತಾರೆ. ಹೀಗಾಗಿ ಕೆಲವೊಂದು ಸಲಹೆ, ಸೂಚನೆ ಕೊಡುತ್ತಾರೆ. ಹಾಗೆಂದ ಮಾತ್ರಕ್ಕೆ ಅವರೇ ನಮ್ಮ ಪರವಾಗಿ ಆಡಳಿತ ನಡೆಸುತ್ತಿದ್ದಾರೆಂದು ಹೇಳುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಸಲಹೆ ನೀಡಬಹುದು. ಅದನ್ನು ಸ್ವೀಕಾರ ಮಾಡಬಹುದು ಅಥವಾ ಬಿಡಬಹುದು ಎಂದರು.

Leave a Reply

Your email address will not be published. Required fields are marked *

You May Also Like

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮ

ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಡಿಪಿಇಪಿ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವನ್ನು ಶಾಲೆಯ ಪ್ರಧಾನ ಶಿಕ್ಷಕ ಎಂ.ಟಿ.ಕಟ್ಟಿಮನಿ ಸಸಿಗಳಿಗೆ ನೀರು ಹಾಕುವ ಮೂಲಕ ಆಚರಿಸಲಾಯಿತು.

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ