ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ

ಮುಂಡರಗಿ: ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾವು ಬೆಳೆಸುವ ಗಿಡಿಮರಗಳು ನಮ್ಮನ್ನು ಜೀವನ ಪೂರ್ತಿ ಸಲಹುತ್ತವೆ. ಜೊತೆಗೆ ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗುವ ದೊಡ್ಡ ಕಾಣಿಕೆಯಾಗಿದೆ ಎಂದು ಪರಿಸರ ಪ್ರೇಮಿ ಪ್ರೊ.ವಿ.ಎಫ್.ಅಂಗಡಿ ಹೇಳಿದರು.

ಅವರು ಪಟ್ಟಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಒಂದೊಂದು ಗಿಡ ಬೆಳೆಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡದಲ್ಲಿ ಈಗಿರುವ ಅರಣ್ಯ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆಗೆ ಬೆಳೆಸುವ ಕಾರ್ಯವಾಗಬೇಕು. ಜನಜಾಗೃತಿ ಹಾಗೂ ಕಾಳಜಿಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರ್.ಎಫ್.ಓ ಪ್ರದೀಪ ಎಸ್ ಪವಾರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಅರಣ್ಯ ಇಲಾಖೆಗೆ ಯುವಕರ ಸಹಕಾರ ಕೂಡ ಅತ್ಯವಶ್ಯಕವಾಗಿದೆ. ಇದರಿಂದ ಪರಿಸರಕ್ಕೆ ಪೂರಕವಾದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಎ.ಎಫ್.ಶೇಖ್, ಮೈಲಾರಪ್ಪ ಮಡಿವಾಳರ ಸೇರಿದಂತೆ ಅರಣ್ಯ ರಕ್ಷಕರು, ಇತರರು ಉಪಸ್ಥಿತರಿದ್ದರು.

Exit mobile version