ಮುಂಬಯಿ:  ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 8 ಜನ ಜೈಲು ಸಿಬ್ಬಂದಿಗಳು ಇದ್ದಾರೆ. ಸದ್ಯ ಎಲ್ಲರನ್ನೂ ಐಸೋಲೇಷನ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸೊಲ್ಲಾಪುರ ಜೈಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು.  ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ತಕ್ಷಣವೇ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಒಟ್ಟು 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೂ ಸೊಲ್ಲಾಪುರ ಜಿಲ್ಲೆಯಲ್ಲಿ 1144 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 99 ಜನ ಸಾವನ್ನಪ್ಪಿದ್ದಾರೆ. ಮಹಾಮಾರಿ ಕೊರೊನಾ ಮಹಾರಾಷ್ಟ್ರ ರಾಜ್ಯದಲ್ಲಿ ಮೇಲೆ ತನ್ನ ಕರಿನೆರಳು ಬೀರಿದೆ. ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ ಸುಮಾರು 74 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 2,587 ಜನ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ

ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರದ ಚಿಂತನೆ

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ.

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಗದಗ ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಗದಗ ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.