ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ವಿಶ್ವ ಸಂಸ್ಥೆ ಭದ್ರತಾ ಸಮಿತಿಗೆ ಭಾರತ ತಾತ್ಕಾಲಿಕ‌ ಸದಸ್ಯ

ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ…

ಗದಗ ಜಿಲ್ಲೆಯಲ್ಲಿ ಮತ್ತೆ ಮೂಡಿವೆ ಬಲ್ದೋಟ ಹೆಜ್ಜೆ.! : ಕಪ್ಪತ್ತಗುಡ್ಡಕ್ಕೆ ಕನ್ನಹಾಕಲು ನಡೆದಿದೆಯಾ ಯತ್ನ..?

ಇನ್ನೇನು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಜೊತೆಗೆ ವನ್ಯಧಾಮ ಆಯಿತಲ್ಲ ಬಲ್ದೋಟ ಕಾಟ ತಪ್ಪಿತು ಅಂತ ಗದಗ ಜಿಲ್ಲೆಯ ಪರಿಸರ ಪ್ರೇಮಿಗಳು ಹಾಗೂ ಜೀವಪರ ಮನಸುಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಜಿಲ್ಲೆಯಲ್ಲಿ ಬಲ್ದೋಟ ಹೆಜ್ಜೆ ಮೂಡಿವೆ.

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…