ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ ಸಂಚರಿಸಬಹುದು.
ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿ ಹೊತ್ತಿನಲ್ಲಿಯೂ ಸಂಚರಿಸಬಹುದು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ಸರ್ಕಾರ ಕರ್ಫ್ಯೂ ಹೇರಿತ್ತು. ಆದರೆ, ಇನ್ನೂ ಮುಂದೆ ಆ ಕರ್ಫ್ಯೂ ನಿಯಮವನ್ನು ಹಿಂಪಡೆದಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಇನ್ನೂ ಎಷ್ಟು ತಿಂಗಳು ಇರಲಿದೆ ಅಪಾಯ!

ಬೆಂಗಳೂರು: ರಾಜ್ಯಕ್ಕೆ ಇನ್ನೂ ಮೂರು ತಿಂಗಳು ಮಹಾ ಆಪತ್ತು ಕಾದಿದೆ ಎಂಬ ಸ್ಫೋಟಕ ಸತ್ಯವೊಂದು ತಜ್ಞರಿಂದ…

ಶೀಘ್ರವೇ ಅಂಗನವಾಡಿ ಬಾಗಿಲು ತೆರೆಯಲು ಸರ್ಕಾರ ನಿರ್ಧಾರ

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.