ಗದಗ: ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ  2ನೇ ಕ್ರಾಸ್ ಇದರ  ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ, ಗದಗ ಉಪ ವಿಭಾಗಾಧಿಕಾರಿ ಇವರನ್ನು ಈ ಎರಡೂ ಪ್ರದೇಶಗಳ ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ  ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್ ಝೋನ್‌ನ  ಮೊದಲ ಒಂದು ಕಿ.ಮೀ ವ್ಯಾಪ್ತಿಯ ತೀವ್ರ ಬಫರ್‌ಝೋನ ಪ್ರದೇಶದ  ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ ನಡೆಸಲಾಗುವುದು.  

ಅಂಗಡಿಗಳು ಬಂದ್..!

ನಿಯಂತ್ರಿತ ವಲಯಗಳ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡುವುದು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಜರುಗಿಸಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ. ಈ ಪ್ರದೇಶಗಳ ಜನರಿಗೆ ಅವರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಗೃಹಪ್ರತಿಬಂಧ ಕಡ್ಡಾಯವಾಗಿದ್ದು ಮನೆ ಬಿಟ್ಟು ಹೊರಗೆ ಬರುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ಕರ್ತವ್ಯ ನಿರತ ವಾಹನ ಹೊರತುಪಡಿಸಿ ಇತರ ವಾಹನಗಳ ಸಂಚಾರವನ್ನು ನಿರ್ಭಂಧಿಸಿದೆ.  

ಸಾಮಾನ್ಯ ವಲಯವಾಗಿ ಬದಲಾಗುವುದು ಯಾವಾಗ..?

ನಿಯಂತ್ರಿತ ವಲಯ ಎಂದು ಘೋಷಣೆ ಮಾಡಿದ 28  ದಿನಗಳ ಒಳಗೆ ಅಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ವರದಿಯಾಗದೇ ಇದ್ದಲ್ಲಿ ಅಥವಾ ಆ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಸಂಪರ್ಕಗಳು/ ಗೃಹ ದಿಗ್ಬಂಧನದಲ್ಲಿ ಸಕ್ರಿಯವಾಗಿದ್ದರೆ  ಆಗ  ಆ ನಿಯಂತ್ರಿತ ವಲಯವು ಸಾಮಾನ್ಯ ವಲಯವಾಗಿ ಮತ್ತು ಬಫರ್ ಝೋನ್ ಸಾಮಾನ್ಯ ವಲಯವಾಗಿ ಬದಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.     

ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಕಂಟೈನ್‌ಮೆಂಟ್, ಬಫರ್ ಝೋನ್ ಮತ್ತು ಕ್ಲಸ್ಟರ್‌ಗಳಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಕುರಿತು ಕಾರ್ಯನಿರ್ವಹಿಸುವ ಇನ್ಸಿಡೆಂಟ್ ಕಮಾಂಡರ್, ಪೊಲೀಸ್, ಆರೋಗ್ಯ, ಗದಗ ಬೆಟಗೇರಿ ನಗರಸಭೆ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಕರ್ತವ್ಯಗಳನ್ನು ನಿಗದಿಪಡಿಸಿ ಅವುಗಳನ್ನು ಜವಾಬ್ದಾಯಿಂದ ನಿರ್ವಹಿಸಲು ತಿಳಿಸಲಾಗಿದೆ. ಉಪನಿರ್ದೇಶಕರು ಆಹಾರ, ಯೋಜನಾ ನಿರ್ದೇಶಕರು ನಗರಾಭಿವೃದ್ಧಿಕೋಶ, ನಗರಸಭೆ ಪೌರಾಯುಕ್ತರು ಹಾಗೂ ಗದಗ ತಹಶೀಲ್ದಾರ ಇವರುಗಳು ನಿಯಂತ್ರಿತ ಪ್ರದೇಶದ ಜನರಿಗೆ ದಿನಬಳಕೆ ಅವಶ್ಯಕ ವಸ್ತುಗಳ ಪೂರೈಕೆಯು ಸಮರ್ಪಕವಾಗಿರುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.    

Leave a Reply

Your email address will not be published.

You May Also Like

ಶಿರಹಟ್ಟಿ ತಾಲೂಕಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಹಶೀಲ್ದಾರ ನೀಡಿದ ಮಾಹಿತಿ

ಶಿರಹಟ್ಟಿ: ಪ್ರಸ್ತುತ ವರ್ಷದಲ್ಲಿ ಕೊರೊನಾ ನಿಯಮಾನುಸಾರ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ ಯಲ್ಲಪ್ಪ…

ಸದ್ಯದಲ್ಲಿಯೇ ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿದೆಯಂತೆ ಬಾಂಗ್ಲಾದೇಶ!

ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

ಲಿಂಗಾಯತರನ್ನು ಮುಗಿಸಲು ಪ್ರಹ್ಲಾದ್ ಜೋಶಿ ನಮ್ಮ ವಿರುದ್ಧ ನಿಂತಿದ್ದಾರೆ – ವಿಜಯ್ ಕುಲಕರ್ಣಿ ಆರೋಪ!

ಹುಬ್ಬಳ್ಳಿ : ಯೋಗೀಶಗೌಡ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೊಳಪಟ್ಟಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಮೂಲಕ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.