ಬೆಂಗಳೂರು: ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕು. ಜೊತೆಗೆ ಅನರ್ಹರು ಈ ಸೌಲಭ್ಯ ದುರುಪಯೋಗ ಪಡಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಪ್ರಾರಂಭಕ್ಕೆ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸುವಂತೆ ಸೂಚಿಸಿದರು. ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆಹಾರ ಮತ್ತು ನಾಗರಿಕರ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪಡಿತರ ವಿತರಣೆ ಮಾಡಲಾಗಿದೆ. ಶೇ. 95ರಷ್ಟು ಪಡಿತರಚೀಟಿದಾರರು ಪಡಿತರ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿ 98,079 ಫಲಾನುಭವಿಗಳಿಗೆ 3 ಅನಿಲ ಸಿಲಿಂಡರುಗಳನ್ನು ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗಿದೆ. ನಿಗಮದ 53 ಗೋದಾಮುಗಳು ಶಿಥಿಲಾವಸ್ಥೆಯಲ್ಲಿದ್ದು, 42 ಖಾಲಿ ನಿವೇಶನಗಳು ನಿಗಮದ ಒಡೆತನದಲ್ಲಿದೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ 95 ಗೋದಾಮುಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಪ್ರತಿ ತಿಂಗಳ 1 ರಿಂದ 10ನೇ ದಿನಾಂಕದವರೆಗೆ ಮಾತ್ರ ಆಯಾ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ.

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ

ಸಂಭ್ರಮದ ಯಲಗೂರ ರಥೋತ್ಸವ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಎಲ್ಲಡೆ ಜಯಘೋಷದ ಕರತಾಡನ.ಅಪಾರ ಭಕ್ತಾದಿಗಳ ಮೊಗದಲ್ಲಿ ಸಂಭ್ರಮೋಲ್ಲಾಸ.ಕಣಕಣದಲ್ಲೂ ಅಮಿತ್ಯೋತ್ಸಾಹ.…

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ