ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9887 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, ನಿನ್ನೆ ಒಂದೇ ದಿನ ದೇಶದಲ್ಲಿ 294 ಜನರು ಸಾವನ್ನಪ್ಪಿದ್ದಾರೆ. ಇದು ಕೂಡ ನೂತನ ದಾಖಲೆ ಮಾಡಿದೆ.

ಇಲ್ಲಿಯವರೆಗೂ ದೇಶದಲ್ಲಿ 2,36,657 ಪ್ರಕರಣಗಳು ದಾಖಲಾಗಿವೆ. ಸದ್ಯ 1,15,942 ಪ್ರಕರಣಗಳು ಸಕ್ರೀಯವಾಗಿವೆ. 1,14,073 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ 6,642 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಭಾರತವು ತನ್ನ ಸ್ಥಾನವನ್ನು ಹೆಚ್ಚುತ್ತ ಸಾಗುತ್ತಿದೆ. ನಿನ್ನೆಯ ದಿನ ದೇಶವು ಇಟಲಿಯನ್ನು ದಾಟಿ 6ನೇ ಸ್ಥಾನಕ್ಕೆ ಜಿಗಿದಿದೆ.

ಅಮೆರಿಕಾ, ಬ್ರೆಜಿಲ್, ರಷ್ಯಾ, ಸ್ಪೇನ್ ಮತ್ತು ಬ್ರಿಟನ್ ಕೊರೊನಾ ಪೀಡಿತ ಟಾಪ್ 5 ದೇಶಗಳಾಗಿವೆ. ಸದ್ಯ ಇಟಲಿ ಕೊರೊನಾದಲ್ಲಿ ಸುಧಾರಣೆ ಕಂಡಿದ್ದು, 7ನೇ ಸ್ಥಾನಕ್ಕೆ ಇಳಿದಿದೆ.

Leave a Reply

Your email address will not be published. Required fields are marked *

You May Also Like

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ..!

ಇಂಫಾಲ: ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೂವರು ಶಾಸಕರು ಮತ್ತು ಎನ್.ಪಿ.ಪಿ.ಯ ಒಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ.…

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…