ಬೆಂಗಳೂರು: ಅವನೇ ಶ್ರೀಮನ್ನಾರಾಯಣ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಲಾಕ್ ಡೌನ್ ಹಿನ್ನೆಲೆಯಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ ಆಚರಿಸಲು ಅವರಿಗೆ ಆಗುತ್ತಿಲ್ಲ. ಹೀಗಾಗಿ ಕುಟುಂಬಸ್ಥರೊಂದಿಗೆ ಸಂಭ್ರಮ ಆಚರಿಸಿದ್ದಾರೆ.

ರಕ್ಷಿತ್ ಶೆಟ್ಟಿ ಸದ್ಯ 777 ಚಾರ್ಲಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲಾಕ್‌ಡೌನ್‌ ಗೂ ಮುನ್ನ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಹೊರ ರಾಜ್ಯದ ಲೊಕೇಷನ್‌ಗಳಿಗೆ ಇಡೀ ಚಿತ್ರತಂಡ ತೆರಳಿತ್ತು. ಆದರೆ, ಲಾಕ್ ಡೌನ್ ನಿಂದಾಗಿ ರಕ್ಷಿತ್‌ ಶೆಟ್ಟಿ ಮತ್ತು ಟೀಂ ಸೆಲ್ಫ್ ಕ್ವಾರಂಟೈನ್ ನಲ್ಲಿ ಇರಬೇಕಾಯಿತು. ಈಗ ಅದೇ 777 ಚಾರ್ಲಿ ಟೀಮ್‌ನಿಂದ ರಕ್ಷಿತ್‌ ಜನ್ಮದಿನಕ್ಕೆ ವಿಶೇಷ ಗಿಫ್ಟ್‌ ಸಿಗುತ್ತಿದೆ.

ಈ ಚಿತ್ರದಲ್ಲಿ ನಾಯಿ ಮತ್ತು ಮನುಷ್ಯನ ನಡುವಿನ ಒಡನಾಟದ ಕಥೆ ಇದೆ. ಕಿರಣ್‌ ರಾಜ್‌ ನಿರ್ದೇಶನ ಮಾಡುತ್ತಿದ್ದಾರೆ.

ಅವನೇ ಶ್ರೀಮನ್ನಾರಾಯಣ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್‌ ಮಾಡಲಿಲ್ಲ. ಹೀಗಾಗಿ ರಕ್ಷಿತ್ ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Leave a Reply

Your email address will not be published.

You May Also Like

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಅಮೆರಿಕದಲ್ಲಿ ಕೆಲಸ ಹುಡುಕುವುದು ಇನ್ನು ಕನಸು ಮಾತ್ರನಾ?

ವಾಷಿಂಗ್ಟನ್‌: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಚ್‌-1ಬಿ, ಎಲ್‌-1 ವೀಸಾ ಮತ್ತು ಇತರೆ…

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.