ಗದಗ: ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಪಿ-5014(29ವರ್ಷ), ಪಿ-5015(28 ವರ್ಷ), ಪಿ-5016(32 ವರ್ಷ), ಪಿ-5017(29 ವರ್ಷ) ನಾಲ್ಕು ಪ್ರಕರಣಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಪಿ-5014 ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಪಿ-5015 ಮತ್ತು ಪಿ-5016 ಕೇಸ್ ಗಳು ಪಿ-4079ರ ಸಂಪರ್ಕದಿಂದ ಸೋಂಕು ತಗುಲಿದೆ. ಈ ಎರಡು ಕೇಸ್ ಗಳನ್ನು ನಗರದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿ-5017 ಕೇಸ್ ಗೆ ಸೋಂಕು ತಗುಲಿರುವ ಬಗ್ಗೆ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 41 ಪ್ರಕರಣಗಳು ಪತ್ತೆಯಾಗಿದ್ದು ಇದರಲ್ಲಿ ಗುಣಮುಖ ಹೊಂದಿ 26 ಕೇಸ್ ಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಸದ್ಯ 13 ಕೇಸ್ ಗಳು ಸಕ್ರೀಯವಾಗಿವೆ. 2 ಪ್ರಕರಣಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಭಾವನೆಗಳ ರಸಕಾವ್ಯಕ್ಕೆ ಚಿತ್ರಕಲೆ ಸ್ಪೂರ್ತಿ- ಉಮೇಶ ಶಿರಹಟ್ಟಿಮಠ ಅಭಿಮತ

ಚಿತ್ರ ಬರಹ : ಗುಲಾಬಚಂದ ಜಾಧವವಿಜಯಪುರ : ಚಿತ್ರಕಲೆ ನಮ್ಮ ಸಂಸ್ಕೃತಿಗಳ ಜೀವನಾಡಿ.ಅದು ಜೀವನದ ಒಂದು…

ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು!

ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.