ಮುಂಡರಗಿ: ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಮೇ.26 ರಂದು ಇಲ್ಲಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ವೇಳೆ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನೀಲಪ್ಪ ದೊಡ್ಡಮನಿ, ಆಯ್ಕೆಯಾಗಿದ್ದರು.

ಅಧ್ಯಕ್ಷರ ಆಯ್ಕೆ ಪ್ರಕ್ರಿಯೇ ಪ್ರಶ್ನಿಸಿ ಈ ಹಿಂದಿನ ಅವಧಿಗೆ ಎಪಿಎಂಸಿ ಅಧ್ಯಕ್ಷರಾಗಿದ್ದ ಶಿವಕುಮಾರಗೌಡ ಪಾಟೀಲ್ ಜಿಲ್ಲಾ ನ್ಯಾಯಾಲಯದಲ್ಲಿ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಅರ್ಜಿ ಪುರಸ್ಕರಿಸಿದ ಜಿಲ್ಲಾ ನ್ಯಾಯಾಲಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೇಗೆ ತಡೆಯಾಜ್ಞೆ ನೀಡಿದೆ.

ಕೃಷಿ ಉತ್ಪನ್ನ ಮಾರಾಟ ಅಭಿವೃದ್ಧಿ ಆಕ್ಟ್ 1966 ಪ್ರಕಾರ ಅರ್ಜಿ ಪುರಸ್ಕೃತವಾಗಿದ್ದು, ರವೀಂದ್ರ ಉಪ್ಪಿನಬೆಟಗೇರಿ ಅವರ ಆಯ್ಕೆ ಮತ್ತು ಆಯ್ಕೆ ಪ್ರಕ್ರಿಯೇಗಳಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿದೆ.

Leave a Reply

Your email address will not be published. Required fields are marked *

You May Also Like

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಅಸ್ವಸ್ಥಗೊಂಡ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ ಸಂಜೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.