ಬೆಂಗಳೂರು: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…