ಬೆಂಗಳೂರು: ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮಜರುಗಿಸಲಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ,ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ? ಎಂದು ಅವರು ಟ್ವೀಟರ್ ಮೂಲಕ ಪ್ರಶ್ನಿಸಿದ್ದಾರೆ.

ಇಂದು ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ‍್ನಿಸಿರುವ ಅವರು, ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ,ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು.ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದುಸರ್ಕಾರದ ಗಮನದಲ್ಲಿರಲಿ ಎಂದಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ.ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…

ಮಕ್ಕಳಿಗೆ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಆಯುರ್ವೇದ ಔಷಧ ಬಳಸಿ

ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ…